ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೊಪ್ಪಳ, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಮಹಿಳೆಯರಿಗೆ ಈತ್ತೀಚಿಗೆ ಕ್ಯಾನ್ಸರ್ ಎಂಬ ಮಾರಕ ರೋಗ ಬರುತ್ತಿದೆ. ಅದರಲ್ಲೂ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಗರ್ಭಕೊರಳಿನ ಕ್ಯಾನ್ಸರ್‍ಗಳೆಲ್ಲಾ ಮಹಿಳೆಯರ ದೇಹಕ್ಕೆ ಸಾಕಷ್ಟು ಮಾರಕವಾಗಿವೆ. ನಿರಂತರವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಕೊಳ್ಳ
ಮಹಿಳೆಯರು ಕ್ಯಾನ್ಸರ್ ರೋಗದಿಂದ ದೂರವಿರಿ: ಡಾ.ಶಕುಂತಲಾ


ಮಹಿಳೆಯರು ಕ್ಯಾನ್ಸರ್ ರೋಗದಿಂದ ದೂರವಿರಿ: ಡಾ.ಶಕುಂತಲಾ


ಕೊಪ್ಪಳ, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಹಿಳೆಯರಿಗೆ ಈತ್ತೀಚಿಗೆ ಕ್ಯಾನ್ಸರ್ ಎಂಬ ಮಾರಕ ರೋಗ ಬರುತ್ತಿದೆ. ಅದರಲ್ಲೂ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಗರ್ಭಕೊರಳಿನ ಕ್ಯಾನ್ಸರ್‍ಗಳೆಲ್ಲಾ ಮಹಿಳೆಯರ ದೇಹಕ್ಕೆ ಸಾಕಷ್ಟು ಮಾರಕವಾಗಿವೆ. ನಿರಂತರವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಕೊಳ್ಳಿ ಎಂದು ವೈದ್ಯಾಧಿಕಾರಿ ಡಾ.ಶಕುಂತಲಾ ಅವರು ಸಲಹೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ, ದೇವದಾಸಿ ಪುನರ್ವಸತಿ ಯೋಜನೆ, ಕೊಪ್ಪಳ ಮತ್ತು ಸಮುದಾಯ ಆರೋಗ್ಯ ಕೇಂದ್ರ, ಕಾರಟಗಿ ಇವರ ಸಂಯುಕ್ತಾಶ್ರಯದಲ್ಲಿ ಕಾರಟಗಿಯಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದರು.

ದೇವದಾಸಿ ಮಹಿಳೆಯರು ಯಾರೋ ಬಂದು ನಮ್ಮನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ ಎಂದು ಕಾಯುತ್ತಾ ಕೂರಬೇಡಿ, ನೀವೇ ನಿಮ್ಮ ಆರೋಗ್ಯ ಸಮಸ್ಯೆಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ನಿರಂತರವಾಗಿ ಬಂದು ತಪಾಸಣೆ ಮಾಡಿಸಿಕೊಳ್ಳಬೆಂಕೆಂದು ಕಿವಿಮಾತು ಹೇಳಿದರು.

ಐ.ಡಿ.ಟಿ.ಸಿ ಆಪ್ತ ಸಮಾಲೋಚಕ ಅನಂತ ಅವರು ಮಾತನಾಡಿ, ಆರೋಗ್ಯ ಇಲಾಖೆಯ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಸುತ್ತಮುತ್ತ ಸಿಗಲು ತರಕಾರಿ, ಕಾಳುಕಡಿಗಳನ್ನು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.

ದೇವದಾಸಿ ಪುನರ್ವಸತಿ ಯೋಜನಾ ಅನುಷ್ಟಾನಾಧಿಕಾರಿ ಭೀಮಣ್ಣ ಅವರು ಮಾಜಿ ದೇವದಾಸಿ ಮಹಿಳೆಯರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರೆ, ಎಸ್.ಟಿ.ಓ ಗಾಯತ್ರಿ ಅವರು ಗುಪ್ತಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ದೇವದಾಸಿ ಪುನರ್ವಸತಿ ಯೋಜನಾ ಅನುಷ್ಠಾಧಿಕಾರಿ ಸಕ್ಕುಬಾಯಿ, ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಮತ್ತು ಸ್ನೇಹಾ ಮಹಿಳಾ ಸಂಘದ ಪ್ರತಿನಿಧಿಗಳಾದ ಮಂಜುಳಾ, ಜಯಶ್ರೀ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಜನಾ ಅನುಷ್ಠಾಧಿಕಾರಿಗಳು ನಿರ್ವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande