ಕೃಷಿ ವಲಯಕ್ಕೆ ಆದ್ಯತೆ ಮೇರೆಗೆ ಸಾಲ ನೀಡಲು ಕರೆ
ಕೃಷಿ ವಲಯಕ್ಕೆ ಆದ್ಯತೆಯ ಮೇರೆಗೆ ಸಾಲ ನೀಡಲು ಕರೆ
ಕೋಲಾರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಬ್ಯಾಂಕರ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಓ ಪ್ರವೀಣ್ ಪಿ. ಬಾಗೇವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕೋಲಾರ, ೦೮ ಮಾರ್ಚ್ (ಹಿ.ಸ) :

ಆ್ಯಂಕರ್ : ಜಿಲ್ಲೆಯಲ್ಲಿ ಅತಿ ಹೆಚ್ಚು ಉದ್ಯೋಗವಕಾಶಗಳನ್ನು ಸೃಷ್ಟಿಸುವ ಶಕ್ತಿಯಿರುವ ಕೃಷಿ, ರೇಷ್ಮೆ, ತೋಟಗಾರಿಕೆ ಹಾಗೂ ಪಶುಸಂಗೋಪನೆ ವಲಯಕ್ಕೆ ಬ್ಯಾಂಕ್ ಗಳು ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ. ಬಾಗೇವಾಡಿ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಬ್ಯಾಂಕರ್ ಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ರಾಷ್ಟಿçಕೃತ ಹಾಗೂ ಖಾಸಗಿ ಬ್ಯಾಂಕ್ ಗಳು ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದರು.

ರೈತರ ಅಭಿವೃದ್ದಿಗಾಗಿ ಹಾಗೂ ಉದ್ಯಮಗಳ ಸ್ಥಾಪನೆ ಹಾಗೂ ಪ್ರೋತ್ಸಾಹಕ್ಕಾಗಿ ಸರ್ಕಾರಗಳು ಹಲವು ಸಹಾಯಧನ ನೀಡುವ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಅನುಷ್ಠಾನ ಮಾಡುವಲ್ಲಿ ಬ್ಯಾಂಕ್ ಗಳು ಪ್ರಧಾನ ಪಾತ್ರ ವಹಿಸಬೇಕು ಎಂದು ಹೇಳಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ನಿಗಮ ಮಂಡಳಿಗಳು, ಪ್ರಾಧಿಕಾರಗಳು ಜಾರಿಗೆ ತಂದಿರುವ ಸ್ವ ಉದ್ಯೋಗಧಾರಿತ ಸಾಲ ನೀಡುವ ಯೋಜನೆಗಳಿಗೆ ತಡ ಮಾಡದೆ ಸಮಪರ್ಕವಾಗಿ ಸಾಲ ವಿತರಿಸುವ ಮೂಲಕ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು ಎಂದರು.

ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕ ಎಂ.ಅಶೋಕ್ ಕುಮಾರ್ ಮಾತನಾಡಿ, ಸಣ್ಣ, ಮಧ್ಯಮ ಉದ್ದಿಮೆಗಳ ಪ್ರಾರಂಭ ಹಾಗೂ ಉನ್ನತೀಕರಣಕ್ಕೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳು ಅಗತ್ಯ ಸಾಲ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಬ್ಬನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ರಾಷ್ಟಿçಕೃತ ಹಾಗೂ ಖಾಸಗಿ ಬ್ಯಾಂಕ್ ಗಳಿಗೆ ಕೃಷಿ, ಗೃಹ, ವಾಹನ, ಉದ್ಯಮ ಸೇರಿದಂತೆ ಮುಂತಾದ ವಲಯಗಳಿಗೆ ಸಂಬ0ಧಿಸಿದ0ತೆ ಸಾಲ ನೀಡುವ ಬಗ್ಗೆ ಭೌತಿಕ ಗುರಿಯನ್ನು ನಿಗದಿಪಡಿಸಿದ್ದು, ಅದನ್ನು ಪ್ರತಿಯೊಬ್ಬರು ತಲುಪಬೇಕು ಎಂದರು.

ಕಾರ್ಯಕ್ರಮದಲ್ಲಿ ಆರ್‌ಬಿಐನ ಅಧಿಕಾರಿ ಶೀಲ ಪ್ರಿಯಾ ಗೌತಮ್, ನಬಾರ್ಡ್ ಬ್ಯಾಂಕ್ ನ ಅಧಿಕಾರಿ ಶಾರದ ಗೆಟ್ಲಾ, ಆರ್ಸೆಟಿ ತರಬೇತಿ ಸಂಸ್ಥೆಯ ನಿರ್ದೇಶಕ ಯಲ್ಲೇಶ್ ಸಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಬ್ಯಾಂಕರ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಓ ಪ್ರವೀಣ್ ಪಿ. ಬಾಗೇವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande