ಆರೋಪಿಗಳ‌ವ ವಿರುದ್ಧ ಕಠಿಣ ಕ್ರಮ : ಪ್ರವಾಸಿಗರಿಗೆ ಭದ್ರತೆ ಖಚಿತ
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್‌ ಮಹಿಳೆ ಹಾಗೂ ಹೋಂ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕ
ಆರೋಪಿಗಳ‌ವ ವಿರುದ್ಧ ಕಠಿಣ ಕ್ರಮ : ಪ್ರವಾಸಿಗರಿಗೆ ಭದ್ರತೆ ಖಚಿತ


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್‌ ಮಹಿಳೆ ಹಾಗೂ ಹೋಂ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲು ಆದೇಶ ನೀಡಿದ್ದೇನೆ. ಇಬ್ಬರು ಆರೋಪಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಸ್ರೇಲ್‌ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಮ್‌ ಸ್ಟೇ ಒಡತಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನುಳಿದ ಮೂವರು ಪುರುಷ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ, ಕಾಲುವೆಗೆ ತಳ್ಳಿದ್ದರು. ಘಟನೆಯಲ್ಲಿ ಓರ್ವ ಪ್ರವಾಸಿಗ ಮೃತಪಟ್ಟಿದ್ದಾನೆ.

ಅತ್ಯಾಚಾರಕ್ಕೆ ಒಳಗಾದ ಇಬ್ಬರು ಮಹಿಳೆಯರು, ಕಾಲುವೆಗೆ ನೂಕಲ್ಪಟ್ಟಿದ್ದ ಇಬ್ನರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande