ಏಪ್ರಿಲ್ ಮೊದಲ ವಾರದಲ್ಲಿ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟ
ಧಾರವಾಡ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬರುವ ಏಪ್ರೀಲ್ ಮೊದಲ ವಾರದಲ್ಲಿ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟ ಮತ್ತು ಸಾಂಸ್
ಏಪ್ರಿಲ್ ಮೊದಲ ವಾರದಲ್ಲಿ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟ


ಧಾರವಾಡ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬರುವ ಏಪ್ರೀಲ್ ಮೊದಲ ವಾರದಲ್ಲಿ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಿದೆ.

ಈಗಾಗಲೇ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಆನ್‍ಲೈನ್ ಮತ್ತು ಕ್ಯೂಆರ್ ಕೋಡ್ ಮುಖಾಂತರ ನೊಂದಣಿ ಪ್ರಾರಂಭ ಮಾಡಲಾಗಿದೆ.

ಆನ್ ಲೈನ್ ಲಿಂಕ್ ಅಥವಾ ಕ್ಯೂಆರ್ ಕೋಡ್ ಮುಖಾಂತರ ಇನ್ನೂ ಹೆಚ್ಚಿನ ನೌಕರರು ನೋಂದಣಿ ಮಾಡಿಕೊಳ್ಳಲು ವಿನಂತಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ (08362447427), ಸಂಘದ ಜಿಲ್ಲಾ ಕಾರ್ಯದರ್ಶಿ ರಮೇಶ ಲಿಂಗದಾಳ (9844484472), ಜಿಲ್ಲಾ ಖಜಾಂಚಿ ಮಂಜುನಾಥ ಯಡಳ್ಳಿ (9448668221) ಹಾಗೂ ನೋಂದಣಿ ಪ್ರಕ್ರಿಯೆಯಲ್ಲಿ ತಾಂತ್ರಿಕ ತೊಂದರೆಗಳಿದ್ದಲ್ಲಿ ಪಿಎಫ್.ಗುಡೆನಕಟ್ಟಿ (7899990008) ಅವರನ್ನು ಸಂಪರ್ಕಿಸಬಹುದೆಂದು ಜಿಲ್ಲಾಧ್ಯಕ್ಷ ಎಸ್ ಎಫ್ ಸಿದ್ದನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande