ಏಪ್ರಿಲ್ 1 ರಿಂದ ಜಮ್ಮುವಿನಿಂದ ಶ್ರೀನಗರಕ್ಕೆ ವಿಮಾನ ಹಾರಾಟ
ಜಮ್ಮು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಜನರಿಗೆ ಶುಭ ಸುದ್ದಿ ಸಿಕ್ಕಿದೆ. ವಿಶೇಷವಾಗಿ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಈ ಸುದ್ದಿ ತುಂಬಾ ಪ್ರಯೋಜನಕಾರಿ ಮತ್ತು ಸಮಯ ಉಳಿತಾಯವಾಗಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರವು ಜಮ್ಮುವಿನಿಂದ ಶ್ರೀನಗರಕ್ಕೆ ಏಪ್ರಿಲ್ ೧ ರಿಂ
ಏಪ್ರಿಲ್ 1 ರಿಂದ ಜಮ್ಮುವಿನಿಂದ ಶ್ರೀನಗರಕ್ಕೆ ವಿಮಾನ ಹಾರಾಟ


ಜಮ್ಮು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಜನರಿಗೆ ಶುಭ ಸುದ್ದಿ ಸಿಕ್ಕಿದೆ. ವಿಶೇಷವಾಗಿ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಈ ಸುದ್ದಿ ತುಂಬಾ ಪ್ರಯೋಜನಕಾರಿ ಮತ್ತು ಸಮಯ ಉಳಿತಾಯವಾಗಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರವು ಜಮ್ಮುವಿನಿಂದ ಶ್ರೀನಗರಕ್ಕೆ ಏಪ್ರಿಲ್ ೧ ರಿಂದ ಪ್ರತಿದಿನ ಬೆಳಿಗ್ಗೆ ವಿಮಾನಯಾನ ಪ್ರಾರಂಭಿಸಲಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರ ಇದನ್ನು ಅನುಮೋದಿಸಿದ್ದು, ಈಗ ಏಪ್ರಿಲ್ 1 ರಿಂದ, ಜಮ್ಮುವಿನಿಂದ ಕಾಶ್ಮೀರಕ್ಕೆ ಪ್ರತಿದಿನ ಬೆಳಿಗ್ಗೆ ನಿಯಮಿತ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ.

ಈ ಕುರಿತು ಕೇಂದ್ರ ಬಾಹ್ಯಾಕಾಶ ಖಾತೆ ರಾಜ್ಯ ಸಚಿವ ಮತ್ತು ಉಧಮ್ಪುರ ಸಂಸದ ಡಾ. ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದು ಸರಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳು ದೂರು ಹಿನ್ನೆಲೆಯಲ್ಲಿ ವಿಮಾನಯಾನ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿತ್ತು ಮನವಿ ಪರಿಗಣಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರ 2025 ರ ಏಪ್ರಿಲ್ 01 ರಿಂದ ಬೆಳಿಗ್ಗೆ 10 ಗಂಟೆಗೆ ಜಮ್ಮುವಿನಿಂದ ಶ್ರೀನಗರಕ್ಕೆ ನಿಯಮಿತ ವಿಮಾನ ಹಾರಾಟವನ್ನು ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ‌ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande