ಪ್ರವಾಸಿಗರ ರಕ್ಷಣೆಗೆ ಅಗತ್ಯ ಕ್ರಮ : ಸಿದ್ದರಾಮಯ್ಯ
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅ
Cm


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande