ಹಾವೇರಿ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಡಾ. ಬಿ. ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರ, ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯದ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೆರೆವೆರಿಸಿದರು.
ಈ ವಿದ್ಯಾರ್ಥಿ ನಿಲಯವನ್ನು ಪರಿಶಿಷ್ಟ ಜಾತಿ (ಎಸ್.ಸಿ.ಪಿ) ಅನುದಾನದ ಅಡಿಯಲ್ಲಿ ರೂ. 6,50.00 ಲಕ್ಷದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು ಹಿಂದುುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಯಾಸಿರ್ ಖಾನ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಬಿಜೆಪಿ ಮಂಡಳ ಅಧ್ಯಕ್ಷ ವಿಶ್ವನಾಥ ಹಾರವಿ, ಶಿವಾನಂದ ಮ್ಯಾಗೇರಿ, ಶ್ರೀಕಾಂತ ಬುಳ್ಳಕನವರ, ನರಹರಿ ಕಟ್ಟಿ ಹಾಗೂ ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa