ದಾವಣಗೆರೆ, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಮನುಷ್ಯತ್ವ ಎಲ್ಲಕಿಂತ ಮಿಗಿಲಾದುದು, ಕುಟುಂಬ ನಿರ್ವಹಿಸುವ ಹೆಣ್ಣನ್ನು ಸದಾ ಗೌರವದಿಂದ ಕಾಣಬೇಕು. ಎಲ್ಲಿ ಹೆಣ್ಣನ್ನು ಗೌರವಿಸಲಾಗುತ್ತೋ ಅಲ್ಲಿ ಸೌಖ್ಯದಿಂದ ಕೂಡಿರುತ್ತದೆ ಎಂದು ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ ಹೇಳಿದರು.
ಶನಿವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಯಾವುದೇ ಪುರುಷನ ಸಾಧನೆಯ ಹಿಂದೆ ಹೆಣ್ಣಿನ ಸಾಧನೆ ಇರುತ್ತದೆ. ಮಹಿಳೆಯಿಲ್ಲದೇ ಗಂಡು ಪರಿಪೂರ್ಣನಾಗಲಾರ, ಎಲ್ಲಿ ಹೆಣ್ಣನ್ನು ಗೌರವಿಸಲಾಗುತ್ತದೋ ಅಲ್ಲಿನ ವಾತಾವರಣ ಬಹಳ ಸೌಖ್ಯದಿಂದ ಕೂಡಿರುತ್ತದೆ. ಯಾವುದೇ ಕೆಲಸಕ್ಕಾಗಲಿ ಇಂತಿಷ್ಟು ವೇತನ ಎಂದು ನಿಗದಿಪಡಿಸಲಾಗಿರುತ್ತದೆ. ಆದರೆ ಬೆಳಿಗ್ಗೆ ಎದ್ದು ಕಸ ಗುಡಿಸಿ, ರಂಗೋಲಿ ಹಾಕಿ ಅಡುಗೆ, ಪಾತ್ರೆ, ಬಟ್ಟೆಯಿಂದ ಹಿಡಿದು ರಾತ್ರಿ ಮಲಗುವ ತನಕ ಕೆಲಸ, ಮಕ್ಕಳ ಪಾಲನೆ, ಪೋಷಣೆಯಲ್ಲಿ ತೊಡಗುವ ಹೆಣ್ಣುಮಕ್ಕಳಿಗೆ ಯಾವ ವೇತನವೂ ಇಲ್ಲ. ಹೀಗೆ ಕುಟುಂಬ ಕಟ್ಟುವ ಹೆಣ್ಣುಮಕ್ಕಳಿಗೆ ಕೋಟಿ ಕೊಟ್ಟರೂ ಸಾಲದು. ಮೌಲ್ಯಾತೀತವಾದ ಇವರ ಸೇವೆಯನ್ನು ಎಲ್ಲರೂ ಗೌರವಿಸಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa