ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಟ್ರೋ ನಿಗಮ ತಿಳಿಸಿದೆ. ನಾಳೆ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸ್ಥಗಿತಗ
Metro


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಟ್ರೋ ನಿಗಮ ತಿಳಿಸಿದೆ.

ನಾಳೆ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ನಮ್ಮ ಮೆಟ್ರೋ ನಿಗಮವು ಭಾನುವಾರ ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ರದ್ದುಪಡಿಸಲಾಗುತ್ತದೆ ಎಂದು ತಿಳಿಸಿದೆ.

ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನ ಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ಮಾಹಿತಿ ನೀಡಿದೆ.

ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಬಿಎಂಆರ್​ಸಿಎಲ್​ ಕೋರಿದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ಬಿಎಂಆರ್​ಸಿಎಲ್​ ವಿಷಾದಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande