ಹಾನಗಲ್, 08 ಮಾರ್ಚ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಹಾನಗಲ್ ಪರಿವರ್ತನಾ ಕಲಿಕಾ ಕೇಂದ್ರ ಗುರುಭವನ ವತಿಯಿಂದ ಮಾರ್ಚ್ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್ 5ರಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯಗಳ ಕ್ರ್ಯಾಶ್ ಕೋರ್ಸ್ ಆರಂಭಗೊಳ್ಳಲಿದೆ. ವಿಷಯ ಪರಿಣಿತರಿಂದ ನಡೆಯುವ ಈ ತರಬೇತಿ ಕಾರ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa