ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದರೆ ಕಾನೂನು ಹೋರಾಟ : ಸಚಿವ ಜೋಶಿ
ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ನಾವೂ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಸಂಸದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕ
Joshi


ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ನಾವೂ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಸಂಸದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ತೀರ್ಮಾನಿಸಿ, ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ ಎಂಬ ಮಾಹಿತಿಯಿದೆ. ನಾವೂ ಇದರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದರು.

ಕಿಡಿಗೇಡಿಗಳು ಪೊಲೀಸ್ ಠಾಣೆ ಸುಡಲು ಹೋಗಿದ್ದರು. ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ಸಹ ನಡೆಸಿದ್ದರು. ಪೊಲೀಸ್ ವಾಹನಗಳನ್ನು ಜಖಂ ಗೊಳಿಸಿದ್ದರು. ಇದನ್ನೆಲ್ಲ ಆಗಿನ ಪೊಲೀಸ್ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಸಮಾಜ ರಕ್ಷಣೆ ಕಾರ್ಯದಲ್ಲಿ ತೊಡಗಿದ ಪೊಲೀಸರನ್ನು ರಕ್ಷಿಸುವ ಇರಾದೆ ಈ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದರು.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೊರಗಿನವರ ಕೈವಾಡವಿದೆ. ಉಗ್ರವಾದ ಚಟುವಟಿಕೆ ಸ್ವರೂಪದಂತಿದೆ ಎಂಬ ಕಾರಣಕ್ಕೆ ಆಗಲೇ ಎನ್ ಐಎ ತನಿಖೆಗೆ ವಹಿಸಲು ಚರ್ಚೆ ನಡೆದಿತ್ತು. ಆದರೆ, ಈ ಸರ್ಕಾರ ಗಲಭೆ ಆರೋಪಿಗಳನ್ನು ಖುಲಾಸೆಗೊಳಿಸಲು ನೋಡುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande