ಮಹಿಳೆ ಸ್ವಾಭಿಮಾನದ ಪ್ರತೀಕ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆ
Women's day


ಬೆಂಗಳೂರು, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆಯರು ಕುಟುಂಬ ಸಮಾಜ ಅಥವಾ ಯಾವುದೇ ಕ್ಷೇತ್ರದಲ್ಲೂ, ಸಮರ್ಥವಾಗಿ ನಿಭಾಯಿಸದೆ ಹಿಂದೆ ಸರಿದ ಉದಾಹರಣೆಗಳಿಲ್ಲ. ಮಹಿಳೆಗೆ ತನ್ನದೇ ಆದ ಜವಾಬ್ದಾರಿ ಇದ್ದು, ಅದನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾಳೆ ಎಂದರು.

ಪುರುಷರಿಗಿಂತ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು. ಮನೆಯ ಒಳಗೆ ಮತ್ತು ಹೊರಗೂ ತನ್ನದೇ ಆದ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬರುವ‌ ಮಹಿಳೆಯರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಸಚಿವರು ಹೇಳಿದರು.

ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ಇಂದು ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಪ್ರತಿ ಹೆಣ್ಣು ಮಗಳ ಜೀವನದ ಹಿಂದೆ ತನ್ನದೇ ಆದ ಕಥೆಗಳಿವೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಗುರಿ ಇಲ್ಲದ ಜೀವನ ಮಹಿಳೆಗೆ ಸಾಧುವಲ್ಲ. ಗುರಿ ಮುಂದಿಟ್ಟುಕೊಂಡೆ ಮುಂದೆ ಸಾಗಬೇಕು ಎಂದು ಸಚಿವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande