ಮಹಿಳೆಯರ ಆರೋಗ್ಯ ಸುರಕ್ಷತೆ ಪ್ರಾಥಮಿಕ ಗುರಿ : ಈಶ್ವರ ಖಂಡ್ರೆ
ಬೀದರ್, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಬೀದರ ಪ್ರಸೂತಿ ಹಾಗೂ ಸ್ತ್ರೀರೋಗ ವೈದ್ಯರ ಸಂಘದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸಂಪೂರ್ಣ ಆರೋಗ್ಯ ಜನ್ಮ ಅಭಿಯಾನ ಕುರಿತ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈ
Bidar women's day


ಬೀದರ್, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಬೀದರ ಪ್ರಸೂತಿ ಹಾಗೂ ಸ್ತ್ರೀರೋಗ ವೈದ್ಯರ ಸಂಘದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸಂಪೂರ್ಣ ಆರೋಗ್ಯ ಜನ್ಮ ಅಭಿಯಾನ ಕುರಿತ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರ ಆರೋಗ್ಯ ಸುಧಾರಣೆ, ತಜ್ಞರ ಮಾರ್ಗದರ್ಶನ, ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಬಗ್ಗೆ ಈ ಕಾರ್ಯಕ್ರಮದಲ್ಲಿ ಚರ್ಚೆ ನಡೆಸಲಾಯಿತು. ಮಹಿಳೆಯರ ಆರೋಗ್ಯ ಸುರಕ್ಷತೆ ಸರ್ಕಾರದ ಪ್ರಾಥಮಿಕ ಗುರಿಯಾಗಿದ್ದು, ಅವರ ಸಬಲಿಕರಣ ಮತ್ತು ಉತ್ತಮ ಆರೋಗ್ಯಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande