ನವದೆಹಲಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯನ್ನು ಭಾರತೀಯ ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದೆ ಮತ್ತು ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಪೂಜಾ ಸ್ಥಳಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ಸ್ಥಳೀಯ ಪೋಲಿಸ್ ಅಧಿಕಾರಿಗಳಿಗೆ ಮನವಿ ಮಾಡಿದೆ.
ಭಾನುವಾರ ಬೆಳಿಗ್ಗೆ, ದಾಳಿಕೋರರು ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದ ಗೋಡೆಗಳನ್ನು ಧ್ವಂಸಗೊಳಿಸಿ, ಆಕ್ಷೇಪಾರ್ಹ ಬರಹಗಳನ್ನು ಬರೆದ್ದಾರೆ. ಈ ಘಟನೆಯ ಕುರಿತು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಭಾರತೀಯ ವಿದೇಶಾಂಗ ಸಚಿವಾಲಯವು, ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ಧ್ವಂಸ ಕೃತ್ಯದ ವರದಿಗಳನ್ನು ನಾವು ನೋಡಿದ್ದೇವೆ. ಇಂತಹ ಹೇಯ ಕೃತ್ಯಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಪೂಜಾ ಸ್ಥಳಗಳಿಗೆ ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಸ್ಥಳೀಯ ಪೋಲಿಸ್ ಅಧಿಕಾರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa