ಬಾಗಲಕೋಟೆ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ಇಂದು ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾ ಪೊಲೀಸ್ ಕಾರ್ಯಾಲಯದ ವರೆಗೆ ಆಯೋಜಿಸಲಾಗಿದ್ದ ಮ್ಯಾರಥಾನ್ ಗೆ ಪೊಲೀಸ್ ಅಧೀಕ್ಷಕ ಅಮರನಾಥ ರೆಡ್ಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಮ್ಯಾರಥಾನ್ ನಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.ಸದರಿ ಕಾರ್ಯಕ್ರಮದ ಮೂಲಕ ಸೈಬರ್ ಸುರಕ್ಷತೆ,ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು,ಸಂಚಾರ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಲಾಯಿತು.ಮ್ಯಾರಥಾನ್ ನಲ್ಲಿ ವಿಜೇತರಾದವರಿಗೆ ಪ್ರಶಂಸನಾ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa