ಚಿತ್ರದುರ್ಗ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಚಲಿಸುತ್ತಿದ್ದ ಲಾರಿಗೆ ಇನ್ನೋವಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.
ನಗರದ ಹೊರವಲಯದ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಮೆದೇಹಳ್ಳಿ ಮತ್ತು ಗುಡ್ಡದರಂಗವ್ವನ ಹಳ್ಳಿಯ ಮಧ್ಯೆ ಈ ಅಪಘಾತ ಸಂಭವಿಸಿದೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಪ್ರಯಾಣಿಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa