ಅಭಿವೃದ್ಧಿ ಕಾಮಗಾರಿಗೆ ಶಾಸಕರ ಚಾಲನೆ
ಗದಗ, 09 ಮಾರ್ಚ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಬಸ್ ನಿಲ್ದಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಎರಡು ಕೋಟಿ ರೂಪಾಯಿಗಳ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ನರೇಗಲ್ಲ ಬಸ್‌ನಿಲ್ದಾಣ ಹಾಗೂ ಶ್ರೀ ಅನ್ನದಾನೇಶ್ವರ ಕಾಲೇಜಿನ ಜೋಡು ರಸ್ತೆ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗ
ಶಾಸಕರ ಪೋಟೋ


ಗದಗ, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಬಸ್ ನಿಲ್ದಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಎರಡು ಕೋಟಿ ರೂಪಾಯಿಗಳ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ನರೇಗಲ್ಲ ಬಸ್‌ನಿಲ್ದಾಣ ಹಾಗೂ ಶ್ರೀ ಅನ್ನದಾನೇಶ್ವರ ಕಾಲೇಜಿನ ಜೋಡು ರಸ್ತೆ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಗದಗ ಜಿಲ್ಲೆಯ ನರೇಗಲ್ ಪಟ್ಟಣದ ರೈತ ಸಂಪರ್ಕ ಕೇಂದ್ರದ ಬಳಿ ಉದ್ದೇಶಿತ ಜೋಡು ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜೋಡು ರಸ್ತೆಯೊಂದಿಗೆ ಇದಕ್ಕೆ ವಿದ್ಯುತ್ ದೀಪಗಳನ್ನೂ ಅಳವಡಿಸಿ ಎರಡನ್ನೂ ಸೇರಿಸಿ ಒಮ್ಮೆಗೆ ಉದ್ಘಾಟನೆ ಮಾಡುವ ಯೋಜನೆ ಇದೆ. ಪಟ್ಟಣದ ಅಭಿವೃದ್ಧಿಯ ವಿಚಾರದಿಂದ ಪ.ಪಂ ಸದಸ್ಯರು ನಮ್ಮೊಂದಿಗೆ ಕೈ ಜೋಡಿಸಿದ್ದು, ಅಭಿವೃದ್ಧಿಯ ಪರ್ವಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು.

ತಾಲೂಕಿನಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, 42 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಕಾಮಗಾರಿನ್ನು ಶೀಘ್ರದಲ್ಲಿಯೆ ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಿಂದ ರೈತಾಪಿ ಜನರಿಗೆ, ಸಾರ್ವಜನಿಕರಿಗೆ ಅನುಕೂಲವಾಗಲಿದೆ. ನರೇಗಲ್ಲ ಶೈಕ್ಷಣಿಕ ಕ್ಷೇತ್ರ, ಇದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನೂ ಒದಗಿಸಿಕೊಡಲು ತಾವು ಸಿದ್ಧ ಎಂದರು.

ಈ ಸಾರೆ ತಾಲೂಕಿನಲ್ಲಿ 1000 ಕೃಷಿ ಹೊಂಡಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಗ್ರಾಮೀಣ ರಸ್ತೆಗಳ ಸುಧಾರಣೆಯನ್ನು ಅಭಿವೃದ್ಧಿ ಪಥ ಯೋಜನೆಯಲ್ಲಿ ಕೈಗೆತ್ತಿಕೊಂಡು 50 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗುವುದು. ನರೇಗಲ್ಲ ತೊಂಡಿಹಾಳ ರಸ್ತೆಯನ್ನು ಸಹ ಇದೇ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.

ನಗರೋತ್ಥಾನ ಯೋಜನೆ ಅಡಿಯಲ್ಲಿ ನರೇಗಲ್ಲ ಪಟ್ಟಣಕ್ಕೆ 10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗುತ್ತಿದ್ದು, ಪಟ್ಟಣ ಅಭಿವೃದ್ಧಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ. ತಾಲೂಕಾ ಸ್ಥಳ ಗಜೇಂದ್ರಗಡದಲ್ಲಿ ನ್ಯಾಯಾಲಯ ಕಟ್ಟಡಕ್ಕಾಗಿ 10 ಕೋಟಿ ರೂ. ತಾಲೂಕು ಕಚೇರಿಗಾಗಿ, ಕ್ರೀಡಾಂಗಣಕ್ಕಾಗಿ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ ಎಂದರು.

ಈಗ ನಡೆದಿರುವ ಅಧಿವೇಶನ ಮುಗಿದ ತಕ್ಷಣವೆ ಅರ್ಹ ಬಡ ಫಲಾನುಭವಿಗಳಿಗೆ ನಿವೇಶನ ಹಂಚುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ತಾಲೂಕಿನ ರೋಣ, ಗಜೇಂದ್ರಗಡ ಮತ್ತು ನರೇಗಲ್ಲದಲ್ಲಿ ಸಿದ್ಧವಾಗಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಶೀಘ್ರವೇ ಪ್ರಾರಂಭಗೊಳಿಸಲಾಗುವದು. ಅಲ್ಲದೆ, ಪಟ್ಟಣದ ಸರಕಾರಿ ಆಸ್ಪತ್ರೆಗೆ ಅಂಬುಲೆನ್ಸ್ ಒದಗಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಶಾಸಕಜಿ.ಎಸ್. ಪಾಟೀಲ್ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande