ಗಂಗಾವತಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಒಬ್ಬನನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ರವಿವಾರ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದಾರೆ.
ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳಾದ ಮಲ್ಲೇಶ್(22) ಮತ್ತು ಚೇತನ್ ಸಾಯಿ ಸಿಳ್ಳೇಕ್ಯಾತರ್ (21) ಬಂಧಿತರು. ಈ ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
ತನಿಖೆಯ ಭಾಗವಾಗಿ ಘಟನಾ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಶನಿವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು.
ಪೊಲೀಸರು ಆರೋಪಗಳನ್ನು ಸ್ಥಳ ಮಹಜರುಗಾಗಿ ಕರೆದುಕೊಂಡು ಬಂದಾಗ, ಆರೋಪಿಗಳನ್ನು ನೋಡಲು ಸಾರ್ವಜನಿಕರು ಸಾಲುಗಟ್ಟಿ ನಿಂತು, ಆಕ್ರೋಶ ವ್ಯಕ್ತಪಡಿಸಿದರು.
ಪರಾರಿಯಾಗಿರುವ ಮತ್ತೋರ್ವ ಆರೋಪಿಯ ಸುಳಿವು ಸಿಕ್ಕಿದ್ದು,ಶೀಘ್ರದಲ್ಲೇ ಬಂಧಿಸಲಾಗುತ್ತದೆ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮಗಳ ಗಮನ ಸೆಳೆದಿದ್ದು, ವಿದೇಶೀ ಪ್ರವಾಸಿಗರು ಹಂಪೆ, ಆನೆಗೊಂದಿ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲು ಭಯ ಬೀತರಾಗಿದ್ದಾರೆ ಎಂದು ಹೇಳಲಾಗಿದೆ.
ಗಂಗಾವತಿ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ