ಗದಗ ಪೊಲೀಸರಿಂದ ಮ್ಯಾರಥಾನ್
ಗದಗ, 09 ಮಾರ್ಚ್ (ಹಿ.ಸ.) : ಆ್ಯಂಕರ್ : ಇಂದು ಗದಗದ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಪೊಲೀಸ್ ಮತ್ತು ಎಸ್ ಬಿ ಐ ಬ್ಯಾಂಕ್ ಸಹಯೋಗದೊಂದಿಗೆ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಎಸ್ಪಿ ಬಿ ಎಸ್ ನೇಮಗೌಡ ಅವರು ಚಾಲನೆ ನೀಡಿ ಮಾತನಾಡಿದರು, ಇತ್ತಿಚೆಗೆ ಮಾದಕ ವಸ್ತುಗಳಿಗೆ ಸಾ
ಫೋಟೋ


ಗದಗ, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ಇಂದು ಗದಗದ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಪೊಲೀಸ್ ಮತ್ತು ಎಸ್ ಬಿ ಐ ಬ್ಯಾಂಕ್ ಸಹಯೋಗದೊಂದಿಗೆ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಎಸ್ಪಿ ಬಿ ಎಸ್ ನೇಮಗೌಡ ಅವರು ಚಾಲನೆ ನೀಡಿ ಮಾತನಾಡಿದರು, ಇತ್ತಿಚೆಗೆ ಮಾದಕ ವಸ್ತುಗಳಿಗೆ ಸಾಕಷ್ಟು ಜನರು ದಾಸರಾಗುತ್ತಿದ್ದಾರೆ‌. ಅವುಗಳಿಂದ ದೂರು ಇರಬೇಕು ಎಂದರು.

ಈ ವೇಳೆ ಎಸ್ ಬಿ ಐ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಜಿಲ್ಲೆಯ ಕ್ರೀಡಾಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಓಟದಲ್ಲಿ ಜಿಲ್ಲೆಯ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ವಿಜಯಶಾಲಿ ಓಟಗಾರರಿಗೆ ನಗದು ಬಹುಮಾನ ಮತ್ತು ಪದಕಗಳನ್ನು ವಿತರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande