ವಿಜಯಪುರ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವರ ದಿ|| ಕೆ.ಹೆಚ್. ಪಾಟೀಲ ಜನ್ಮದಿನೋತ್ಸವದ ಅಂಗವಾಗಿ ವಿಜಯಪುರ ಜಿಲ್ಲೆಯ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹೊಸ ಶೇರುಗಳನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಹಕಾರ ಕ್ಷೇತ್ರಕ್ಕೆ ಕೆ.ಹೆಚ್. ಪಾಟೀಲರ ಕೊಡುಗೆಗಳನ್ನು ಸ್ಮರಿಸಿದರು. ನಂದಿ ಸಹಕಾರಿ ಕಾರ್ಖಾನೆಗೆ ಸರಕಾರದಿಂದ ದೊರೆಯಬಹುದಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa