ಹಿಂದೂಗಳನ್ನು ಕಡೆಗಣಿಸುವ ಓಲೈಕೆ ಬಜೆಟ್ : ಶರಣ್ ಪಾಟೀಲ್
ಗದಗ, 09 ಮಾರ್ಚ್ (ಹಿ.ಸ.) : ಆ್ಯಂಕರ್ : ವೋಟ್ ಬ್ಯಾಂಕ್ ರಾಜಕೀಯ ಮಾಡುವ ಕಾಂಗ್ರೆಸ್ ಪಕ್ಷ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರನ್ನು ಓಲೈಸುವುದಕ್ಕಾಗಿ ಬಹುಸಂಖ್ಯಾತ ಹಿಂದೂಗಳನ್ನೇ ಕಡೆಗಣಿಸಿದೆ ಎಂದು ಉಸಿರು ಫೌಂಡೇಶನ್ ಅಧ್ಯಕ್ಷರು ಹಾಗೂ ಬಿಜೆಪಿ ಮುಖಂಡರಾದ ಶರಣ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರ
ಫೋಟೋ


ಗದಗ, 09 ಮಾರ್ಚ್ (ಹಿ.ಸ.) :

ಆ್ಯಂಕರ್ : ವೋಟ್ ಬ್ಯಾಂಕ್ ರಾಜಕೀಯ ಮಾಡುವ ಕಾಂಗ್ರೆಸ್ ಪಕ್ಷ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರನ್ನು ಓಲೈಸುವುದಕ್ಕಾಗಿ ಬಹುಸಂಖ್ಯಾತ ಹಿಂದೂಗಳನ್ನೇ ಕಡೆಗಣಿಸಿದೆ ಎಂದು ಉಸಿರು ಫೌಂಡೇಶನ್ ಅಧ್ಯಕ್ಷರು ಹಾಗೂ ಬಿಜೆಪಿ ಮುಖಂಡರಾದ ಶರಣ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾನತೆ ತತ್ವದ ಅನುಯಾಯಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಹಿಂದೂಗಳಿಗೆ ಸುಣ್ಣ ಮುಸ್ಲಿಂ ಸಮುದಾಯಕ್ಕೆ ಬೆಣ್ಣೆ ಹಚ್ಚಿರುವುದು ವಿಪರ್ಯಾಸ. ಮುಸ್ಲಿಂ ಮಹಿಳೆಯರಿಗೆ ಆತ್ಮರಕ್ಷಣೆ ತರಬೇತಿ, ಅವರ ಮದುವೆಗೆ ಹಣ ಇಂಥ ಯೋಜನೆಗಳು ಓಲೈಕೆಯನ್ನು ಸಾರಿ ಹೇಳುತ್ತಿವೆ. ಹಿಂದೂ ಹೆಣ್ಣು ಮಕ್ಕಳ ಆತ್ಮರಕ್ಷಣೆಗೂ ಸರ್ಕಾರ ಆದ್ಯತೆ ನೀಡಬೇಕಿತ್ತು ಎಂದು ಜನ ಛೀಮಾರಿ ಹಾಕುತ್ತಿದ್ದಾರೆ.

ಅತ್ತ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರುಪಾಯಿ ಮೀಸಲಿಡಲಾಗಿದೆ, ಇದು ಖಂಡಿತ ರಾಜ್ಯವನ್ನು ದಿವಾಳಿಯಾಗಿಸುವ ಹೆಜ್ಜೆಯಾಗಿದೆ. ಸರ್ಕಾರ ಇನ್ನೂ ಸಾಲ ಮಾಡಿ ಅದನ್ನು ಜನಗಳ ತೆಲೆಗೆ ಹೇರಿಸುವುದು ನಿಶ್ಚಿತವಾಗಿದೆ. ಉಳಿದಂತೆ ಗ್ರಾಮೀಣಾಭಿವೃದ್ಧಿ, ಶಿಕ್ಷಣ ಹಾಗೂ ಕೃಷಿ ಗೆ ಹೇಳಿಕೊಳ್ಳುವಂಥ ಕೊಡುಗೆ ನೀಡಲಾಗಿಲ್ಲ ಉತ್ತರ ಕರ್ನಾಟಕಕ್ಕೆ ಅದರಲ್ಲೂ ಗದಗ ಜಿಲ್ಲೆಯ ಎಲ್ಲಾ ನಿರೀಕ್ಷೆಗಳನ್ನು ಹುಸಿಯಾಗಿಸಿರುವ ನಿರಾಶಾದಾಯಕ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande