ನವದೆಹಲಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದರು.
ಎದೆ ನೋವು ಮತ್ತು ಆತಂಕದ ಕಾರಣ ಉಪರಾಷ್ಟ್ರಪತಿಯವರನ್ನು ಕಳೆದ ರಾತ್ರಿ 2:00 ಗಂಟೆಗೆ ಏಮ್ಸ್‌ಗೆ ದಾಖಲಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಯನ್ನು ಹಾರೈಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa