ಹುಬ್ಬಳ್ಳಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ಧಾರವಾಡ ಅವಳಿನಗರವನ್ನು ಶಾಂತಿ ಮತ್ತು ಸುಂದರ, ಅಪರಾಧ ಮುಕ್ತ ಮಾಡುವಲ್ಲಿ ಪೊಲೀಸ್ ಇಲಾಖೆ ಹತ್ತಾರು ರೀತಿಯ ಕಾರ್ಯಕ್ರಮಗಳನ್ನು ಸಂಘಟಿಸಿ, ಸಾರ್ವಜನಿಕರ ಭಾಗವಹಿಸುವಿಕೆ ಹೆಚ್ವಿಸುತ್ತಿದೆ. ಪ್ರತಿಯೊಬ್ಬರಿಗೂ ದೈಹಿಕ ಮತ್ತು ಮಾನಸಿಕ ಸದೃಡತೆ ಬೇಕು. ಅದನ್ನು ಸಾಧಿಸುವದರಿಂದ ಉತ್ತಮ ವಾತಾವರಣ ಕಾಣಲು ಸಾಧ್ಯವಾಗುತ್ತದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಹೇಳಿದರು.
ಪೊಲೀಸ್ ರನ್-2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಭಾಗದ ಯುವಕ, ಯುವತಿಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಾರ್ವಜನಿಕ ಸಂಘ, ಸಂಘಟನೆಗಳು ಮತ್ತು ಸಮಾಜದ ಗಣ್ಯರು ಭಾಗವಹಿಸಿದ್ದಾರೆ. ತಮ್ಮೆಲ್ಲರ ಸಕ್ರಿಯ ಪಾಲ್ಗೊಳ್ಳುವಿಕೆ ನಮಗೆ ಸಂತೋಷ ಮತ್ತು ಹೆಮ್ಮೆ ತಂದಿದೆ. ಎಲ್ಲರ ಸಹಕಾರದಲ್ಲಿ ಅವಳಿನಗರವನ್ನು ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದ ಊರಾಗಿ ಕಾಪಾಡಿಕೊಳ್ಳೋಣ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa