ಭಾಲ್ಕಿ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : 3 ಕೋಟಿ ಅನುದಾನದಡಿ ಭಾಲ್ಕಿ-ಹುಮನಾಬಾದ್ ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣದಿಂದ ಪ್ರಯಾಣಿಕರು, ವ್ಯಾಪಾರಸ್ಥರು ಹಾಗೂ ಸ್ಥಳೀಯ ನಾಗರಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಭಾಲ್ಕಿ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಯಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಿದ್ದು, ಹೆದ್ದಾರಿ ಮಟ್ಟಕ್ಕೂ ಮೀರಿಸುವ ಗುಣಮಟ್ಟದ ರಸ್ತೆ ನಿರ್ಮಾಣ ಕಾರ್ಯಗಳು ಯಶಸ್ವಿಯಾಗಿ ಈಡೇರಿವೆ. ನೂರಾರು ಕೋಟಿ ರೂ. ಅನುದಾನದಡಿ ಈಗಾಗಲೇ ಹಲವು ರಸ್ತೆಗಳು ನಿರ್ಮಾಣಗೊಂಡಿವೆ, ಇನ್ನೂ ಹಲವೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa