ವಿಜಯಪುರ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಫಿಟ್ನೆಸ್ ಫಾರ್ ಆಲ್ ಹಾಗೂ ವ್ಯಸನಮುಕ್ತ ಕರ್ನಾಟಕ ಗುರಿಯೊಂದಿಗೆ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಓಟಕ್ಕೆ ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,
ಈ ಓಟವು ಶಾರೀರಿಕ ಕ್ಷಮತೆಯ ಪ್ರತೀಕ ಮಾತ್ರವಲ್ಲ, ಸಾಮಾಜಿಕ ಜಾಗೃತಿಯ ಸಂಕೇತವೂ ಹೌದು. ವ್ಯಸನಮುಕ್ತ ಸಮಾಜ ಮತ್ತು ಸದೃಢ ಕರ್ನಾಟಕವನ್ನು ನಿರ್ಮಿಸುವ ಉದ್ದೇಶಪೂರಿತ ಈ ಓಟವು ನಮ್ಮ ಯುವಕರಲ್ಲಿ ಹೊಸ ಚೈತನ್ಯವನ್ನು ಮೂಡಿಸಿದೆ ಎಂದರು.
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕ ದೋಂಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮ ಣನಿಂಬರಗಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಮಹಾನಗರ ಪಾಲಿಕೆ ಸದಸ್ಯರು, ಹಾಗೂ ಸಹಸ್ರಾರು ಯುವಕರು, ಯುವತಿಯರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa