ಬೆಂಗಳೂರು, 9 ಮಾರ್ಚ್ (ಹಿ.ಸ.):
ಆ್ಯಂಕರ್:ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು.
ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ಕನ್ನಡ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ.
ಭಾರತ ಗೆದ್ದಿದೆ.. ಈ ಸಲ ಕಪ್ ನಮ್ದೆ.. ಎಂದಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa