ಬೆಂಗಳೂರು, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ಸಿನ ಒಳಜಗಳಕ್ಕೆ ಕೊನೆಮೊದಲು ಎಂಬುದಿಲ್ಲ. ರಾಜ್ಯ ಕಾಂಗ್ರೆಸ್ಸಿನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಕಾಂಗ್ರೆಸ್ ನ ರಾಷ್ಟೀಯ ಅಧ್ಯಕ್ಷರೇ ಮೈದಾನಕ್ಕೆ ಇಳಿದಿದ್ದಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಕೊನೆಯದ್ದಾಗಲಿದೆ ಎಂದು ಡಿ.ಕೆ.ಶಿವಕುಮಾರ್ ಬಣ ಪ್ರತಿಪಾದಿಸುತ್ತಿದ್ದರೆ, ಇನ್ನೂ 3 ಬಜೆಟ್ ಸಿದ್ದರಾಮಯ್ಯ ಅವರೇ ಮಂಡಿಸಲಿದ್ದಾರೆ ಎಂದು ಸಿದ್ದರಾಮಯ್ಯ ಬಣ ಹೇಳುವ ಮೂಲಕ ಎರಡೂವರೆ ವರ್ಷದ ಒಪ್ಪಂದವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದರಿಂದ ಎರಡೂ ಬಣಗಳಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ.
ಕಾಂಗ್ರೆಸ್ಸಿನ ಈ ಒಳಜಗಳದಿಂದ ರಾಜ್ಯದ ಆಡಳಿತ ಯಂತ್ರ ನಟ್ಟು ಬೋಲ್ಟುಗಳೂ ಕಳಚಿಕೊಂಡಿದೆ. ಅಭಿವೃದ್ಧಿ ಎನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಒಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಶೂನ್ಯ ಅಭಿವೃದ್ಧಿ, ಒಟ್ಟಿನಲ್ಲಿ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ದಿವಾಳಿಗೊಳಿಸುತ್ತಿದೆ ಬಿಜೆಪಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa