ಗದಗ, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಮಹಿಳೆ ದಿನಾಚರಣೆ ಅಂಗವಾಗಿ ಇಂದು ವಿಶ್ವ ಮಹಿಳಾ ದಿನ ಆಚರಣೆ ಮಾಡಲಾಯಿತು.
ಬಿಜೆಪಿ ಗದಗ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ನಿರ್ಮಲಾ ಕೊಳ್ಳಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಮಹಿಳಾ ಆರ್ಥಿಕ ಸಬಲೀಕರಣ ಮತ್ತು ಆರೋಗ್ಯ ಜಾಗೃತಿ ಮಹಿಳಾ ದಿನಾಚರಣೆಯ ಅಂಗವಾಗಿ, ನಮ್ಮ ಜಿಲ್ಲೆಯ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಆರೋಗ್ಯ ಜಾಗೃತಿಗಾಗಿ ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲು ನಾವು ಉದ್ದೇಶಿಸಿದ್ದೇವೆ. ಈ ಕಾರ್ಯಕ್ರಮದಲ್ಲಿ, ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ಯೋಜನೆಗಳ ಫಲಾನುಭವಿಗಳನ್ನು ಸನ್ಮಾನಿಸಿ, ಅವರ ಯಶಸ್ಸಿನ ಕಥೆಗಳನ್ನು ಹಂಚಿಕೊಂಡರು.
ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ರಾಜು ಕುರುಡಗಿ ಮಾತನಾಡಿ ಕೇಂದ್ರ ಸರ್ಕಾರದಿಂದ ಆರ್ಥಿಕ ಸಬಲೀಕರಣ ಯೋಜನೆ, ಮುದ್ರಾ ಯೋಜನೆ, ಜನ್ ಧನ್ ಯೋಜನೆ, ಸ್ಟಾರ್ಟ್ ಅಪ್ ಇಂಡಿಯಾ, ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಹಾಗೂ ಸ್ವಸಹಾಯ ಸಂಘಗಳ ಆರ್ಥಿಕ ನೆರವು ಹಾಗು ಇನ್ನೂ ಹಲವಾರು ಯೋಜನೆಗಳ ಕುರಿತು ಮಾಹಿತಿ ನೀಡಿದರು. ಹಾಗು ಈ ಎಲ್ಲ ಯೋಜನೆಗಳನ್ನು ತಾವು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಡಾ: ರೇಖಾ ಕೊರ್ಲಹಳ್ಳಿ ರವರು ಮನುಷ್ಯನ ಅಂಗಗಾಳ ಅರಿವು ಮೂಡಿಸಿ ಮನುಷ್ಯ ತಾನು ತನ್ನ ದೇಹ ದಾನ ಮಾಡಿದರೆ ಒಂದು ದೇಹ ದಾನದಿಂದ 75 ಜೀವ ಉಳಿಸಬಹುದು ಎಂದು ಸವಿಸ್ತಾರವಾಗಿ ಮಾತನಾಡಿದರು.
ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಜಯಶ್ರೀ ಹಿರೇಮಠ ರವರು ಮಾತನಾಡಿ ಮಹಿಳೆ ಸಾವಲಂಬಿಯಾಗಿ ತನ್ನ ಬದುಕು ರೂಪಿಸಿಕೊಂಡು ಸಮಾಜದಲ್ಲಿ ಸಾಧನೆಗೈಲು ಸಾಧ್ಯ ಎಂದರು.
ಹಿಂದೂಸ್ತಾನ್ ಸಮಾಚಾರ್ / Lalita MP