ಬೆಂಗಳೂರಿನ ಅರಮನೆ ಜಮೀನು ವಿವಾದ : ರಾಜ್ಯ ಸರ್ಕಾರಕ್ಕೆ ಹಿನ್ನಡೆ
ನವದೆಹಲಿ, 22 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ ಆಗಿದೆ. ರಾಜಮನೆತನಕ್ಕೆ, ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಮೂರು ಸಾವಿರ ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು ಅಂದರೆ ಟಿಡಿಆರ್
ಬೆಂಗಳೂರಿನ ಅರಮನೆ ಜಮೀನು ವಿವಾದ : ರಾಜ್ಯ ಸರ್ಕಾರಕ್ಕೆ ಹಿನ್ನಡೆ


ನವದೆಹಲಿ, 22 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ ಆಗಿದೆ.

ರಾಜಮನೆತನಕ್ಕೆ, ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಮೂರು ಸಾವಿರ ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು ಅಂದರೆ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ನ್ಯಾ ಅರವಿಂದ್ ಕುಮಾರ್​ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಆದೇಶ ಹೊರಡಿಸಲಾಗಿದೆ.

ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡುವಂತೆ ರಾಜ್ಯ ಸರ್ಕಾರಕ್ಕೆ ಈ ಹಿಂದೆ ಸೂಚಿಸಲಾಗಿತ್ತು. ಅದರಂತೆ 3,400 ಕೋಟಿ ರೂ. ಮೊತ್ತದ ಟಿಡಿಆರ್​ ಅನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ರಿಜಿಸ್ಟ್ರಾರ್​ನಲ್ಲಿ ಇಡಲಾಗಿತ್ತು. ಇದನ್ನು ರಾಜಮನೆತನದ ಪರ ವಕೀಲರು ವಿರೋಧಿಸಿದ್ದರು.

ಈ ಟಿಡಿಆರ್​ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂ ಕೋರ್ಟ್​ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆ ಅಗಲೀಕರಣಕ್ಕಾಗಿ ಒಟ್ಟು 15.36 ಎಕರೆ ಜಮೀನು ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಉದ್ದೇಶಿಸಿತ್ತು.

ಎಕರೆಗೆ 200 ಕೋಟಿ ರೂಪಾಯಿಯಂತೆ 3ಸಾವಿರದ 400 ಕೋಟಿ ಟಿಡಿಆರ್ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಆದರೆ ಟಿಡಿಆರ್ ನೀಡಲು ಒಪ್ಪದ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿತ್ತು. ಹೀಗಾಗಿ ಸುಗ್ರೀವಾಜ್ಞೆ ಮತ್ತು ಪರಿಹಾರ ನೀಡದ್ದಕ್ಕೆ ರಾಜಮನೆತನ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande