ಜನೌಷಧಿ ಕೇಂದ್ರ ಸ್ಥಗಿತ : ಆದೇಶ ರದ್ದುಪಡಿಸಲು ಬೊಮ್ಮಾಯಿ ಆಗ್ರಹ
ಹಾವೇರಿ, 22 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಹೊರಡಿಸಿದ ಜನೌಷಧಿ ಕೇಂದ್ರ ಸ್ಥಗಿತಗೊಳಿಸುವ ಆದೇಶವನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ. ಹಾ
Letter


ಹಾವೇರಿ, 22 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಹೊರಡಿಸಿದ ಜನೌಷಧಿ ಕೇಂದ್ರ ಸ್ಥಗಿತಗೊಳಿಸುವ ಆದೇಶವನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಸ್ಥಾಪಿತವಾಗಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವುದರಿಂದ, ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿ ಪಡೆಯುವ ಬಡ ಜನರ ಹಕ್ಕಿಗೆ ಧಕ್ಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಜನೌಷಧಿ ಕೇಂದ್ರ ಮಾಲೀಕರ ಸಂಘದ ಮನವಿಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಪುನರ್ ಪರಿಶೀಲಿಸಿ, ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಬೇಕು ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande