ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮ ರಾಜ್ಯದಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್‌ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಸಹಜವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವಿಕೆಯಂತಹ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa