ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಇರುವ ಸುಮಾರು 40225 ಕೆರೆಗಳು ಹಾಗೂ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು.
ಬೆಂಗಳೂರಿನಲ್ಲಿ ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ‘ನಮ್ಮ ಕೆರೆ – 2025, ಆರೋಗ್ಯ ಕೆರೆಗಳು ಆರೋಗ್ಯಕರ ಜೀವಗಳು’ ಎಂಬ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆರೆ ಸಂರಕ್ಷಣೆಯು ಆಯ್ಕೆಯಲ್ಲ, ಅದು ಜೀವಪಾಲನೆಯ ಹೊಣೆಗಾರಿಕೆ ಎಂದು ಹೇಳಿದರು. ಕಳೆದ ಎರಡು ವರ್ಷಗಳಲ್ಲಿ ಸುಮಾರು 12,000 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ತ್ಯಾಜ್ಯ ನೀರಿನ ಪರಿಷ್ಕರಣೆಯ ಮೂಲಕ ಅಂತರ್ಜಲ ವೃದ್ಧಿಗೆ ಕೆ.ಸಿ., ಹೆಚ್.ಎನ್., ವೃಷಭಾವತಿ ವ್ಯಾಲಿ ಯೋಜನೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.
ಈ ಸಂದರ್ಭ ವಿಜ್ಞಾನ ತಂತ್ರಜ್ಞಾನ ಅಕಾಡೆಮಿಯ ನೂತನ ಸದಸ್ಯರಿಗೆ ಸನ್ಮಾನಿಸಲಾಯಿತು. ಪ್ರೊ. ಎ.ಎಚ್. ರಾಜಾಸಾಬ್, ಬಿ.ಕೆ. ಪವಿತ್ರ, ಕಿರಣ್ ಹೆಚ್. ಮಸೂತಿ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa