ನವದೆಹಲಿ, 22 ಮೇ (ಹಿ.ಸ.) :
ಆ್ಯಂಕರ್ : ಅಮೃತ ಭಾರತ ನಿಲ್ದಾಣ ಯೋಜನೆಯ ಅಡಿಯಲ್ಲಿ ಪುನರ್ ಅಭಿವೃದ್ಧಿಗೊಂಡ 103 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ನಿಲ್ದಾಣಗಳು 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿ ಹರಡಿವೆ.
ಅಭಿವೃದ್ಧಿಗೆ ರೂ. 1,100 ಕೋಟಿ ವೆಚ್ಚವಾಗಿದ್ದು, ನಿಲ್ದಾಣಗಳಲ್ಲಿ ಆಧುನಿಕ ಸೌಲಭ್ಯಗಳು ಹಾಗೂ ಪ್ರಾದೇಶಿಕ ಶೈಲಿಯ ವಿನ್ಯಾಸಗಳೊಂದಿಗೆ ಅನುಭವವರ್ಧಿತ ಸಾರಿಗೆ ಕೇಂದ್ರಗಳಾಗಿ ರೂಪಿಸಲಾಗಿದೆ. ಕರ್ನಾಟಕ, ಆಂಧ್ರ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ನಿಲ್ದಾಣಗಳು ಈ ಯೋಜನೆಯಡಿ ಅಭಿವೃದ್ಧಿಗೊಂಡಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa