ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿನ 1400 ಜನೌಷಧಿ ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ 180 ಕೇಂದ್ರಗಳ ಬಗ್ಗೆ ಮಾತ್ರ ಸ್ಥಗಿತದ ಚರ್ಚೆ ನಡೆದಿದೆ. ಸಾರ್ವಜನಿಕ ಆಸ್ಪತ್ರೆಗೆ ಉಚಿತ ಔಷಧಿ ಲಭ್ಯವಿರುವಾಗ, ವೈದ್ಯರು ಚೀಟಿ ನೀಡಿ ಹೊರಗಡೆಯಿಂದ ಔಷಧಿ ತರಿಸುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿ, ನಿರ್ಧಾರದ ಹಿಂದೆ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ, ಔಷಧ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುತ್ತಿದೆ ಎಂದರು.
ಹಾಲಿ ಕೇಂದ್ರಗಳ ಒಪ್ಪಂದಗಳ ಅವಧಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಉಚಿತ ಔಷಧಿ ಪಡೆಯಲು ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಲಭ್ಯವಿದೆ ಎಂದು ಸಚಿವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa