ಗದಗ, 22 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಶಿಗ್ಲಿ ಗ್ರಾಮ ಪಂಚಾಯತ್ಯ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ-2025 ರ ಹಿನ್ನೆಲೆಯಲ್ಲಿ ಮೇ 25 ರಂದು ಮತದಾನವು ಜರುಗಲಿದೆ.
ಈ ಸಮಯದಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನ ಜರುಗಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾನವು ಮುಕ್ತಾಯಗೊಳ್ಳುವ ಪೂರ್ವದ 48 ಗಂಟೆಗಳನ್ನು ಮದ್ಯ ವಹಿವಾಟಿನ ಶುಷ್ಕ ದಿನಗಳೆಂದು ಘೋಷಿಸಲಾಗಿದೆ. ಲಕ್ಷ್ಮೇಶ್ವರ ತಾಲೂಕು ಶಿಗ್ಲಿ ಗ್ರಾಮ ಪಂಚಾಯತಿಯ ಪ್ರದೇಶಗಳ ವ್ಯಾಪ್ತಿಯಲ್ಲಿ ಮೇ 23 ರ ಸಂಜೆ 5 ಗಂಟೆಯಿಂದ ಮೇ 25 ರ ಮದ್ಯರಾತ್ರಿಯರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮದ್ಯ ಮಾರಾಟದ ಎಲ್ಲ ವರ್ಗಗಳ ಮಳಿಗೆಗಳನ್ನು ಮುಚ್ಚಲು ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು,ಅಧಿಬೋಗದಾರರು ಮತ್ತು ಸಂದರ್ಭಾನುಸಾರ ಅದರ ವ್ಯವಸ್ಥಾಪಕರು ಮುಚ್ಚಲು ಆದೇಶಸಿದೆ.
ಈ ಅವಧಿಯಲ್ಲಿ ಯಾವುದೇ ಮದ್ಯ ಅಂಗಡಿ, ಬಾರ್, ರೆಸ್ಟೋರೆಂಟ್, ಕ್ಲಬ್, ಡಿಪೋಗಳಲ್ಲಿ ಮದ್ಯ ಮಾರಾಟ ಸೇವೆಯ ಕುರಿತು ಅಧಿಕೃತ ಲೈಸನ್ಸ್ ಪಡೆದ ಯಾವುದೇ ವ್ಯವಹಾರ ಕೇಂದ್ರಗಳಲ್ಲಿ ಮದ್ಯ ಮಾರಾಟ ಸರಬರಾಜು ಮತ್ತು ಸೇವೆಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನೀತಿ ಸಂಹಿತೆ ಜ್ಯಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು . ಅಬಕಾರಿ ಉಪ ಆಯುಕ್ತರು, ಗದಗ ಇವರು ತಮ್ಮ ವ್ಯಾಪ್ತಿಯಲ್ಲಿ ಇದರ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Lalita MP