ಗದಗ, 22 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರ ಮೇ 23 ರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.
ಮೇ 23 ರಂದು ಬೆಳಿಗ್ಗೆ 10.30 ಗಂಟೆಗೆ ಭರತ್ ಮೇಗಾ ಸಿಟಿ ಕೊಪ್ಪಳ ರಸ್ತೆ ಗದಗ ಇಲ್ಲಿ ಸಂಕನೂರ ಇನಸ್ಟಿಟ್ಯೂಟ್ ಆಪ್ ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 1 ಗಂಟೆಗೆ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಿದ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಬೂ ಹೊಸಹಳ್ಳಿಯಲ್ಲಿ ಆಯೋಜಿಸಿದ ಶರಣ ಸಂಸ್ಕೃತಿ ಜಾತ್ರಾ ಮಹೊತ್ಸವ ಬೂದಿಶ್ವರ ಹೊಸಹಳ್ಳಿ 2025 ರಲ್ಲಿ ಪಾಲ್ಗೊಂಡು ಗದಗನಲ್ಲಿ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP