ಹುಬ್ಬಳ್ಳಿ, 22 ಮೇ (ಹಿ.ಸ.) :
ಆ್ಯಂಕರ್ : ಕೇಂದ್ರ ಲೋಕಸೇವಾ ಆಯೋಗದಿಂದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳು ಮೇ 25 ರಂದು ಹುಬ್ಬಳ್ಳಿ ಧಾರವಾಡ ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಮಾಡಲು ಆದೇಶಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಅವಳಿ ನಗರ ಉಪ ಪೊಲೀಸ ಆಯುಕ್ತ ಮಹಾನಿಂಗ ನಂದಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa