ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಡಿ.ಕೆ.ಶಿವಕುಮಾರ್
ಬೆಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕ
Name change


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande