ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಸಲು ಅಪರ ಜಿಲ್ಲಾಧಿಕಾರಿಗಳ ಸೂಚನೆ
ರಾಯಚೂರು, 23 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ.26 ರಿಂದ ಜೂನ್ 2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನ ನೀಡಿದ್ದಾರೆ. ನಗರದ ನ
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಸಲು ಅಪರ ಜಿಲ್ಲಾಧಿಕಾರಿಗಳ ಸೂಚನೆ


ರಾಯಚೂರು, 23 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ.26 ರಿಂದ ಜೂನ್ 2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನ ನೀಡಿದ್ದಾರೆ.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಒಟ್ಟು 16,058 ವಿದ್ಯಾರ್ಥಿಗಳು ಪರೀಕ್ಷೆ-2 ಬರೆಯಲು ಹೆಸರು ನೋಂದಾಯಿಸಿದ್ದಾರೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ ಹಾಗೂ ಜಿಲ್ಲಾ ಹಂತದ ವೆಬ್ ಕಾಸ್ಟಿಂಗ್ ಮಾಡಿ ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬ್ಲಾಕ್ ಹಂತದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರನ್ನು ನೇಮಿಸಿದ್ದು, ಪ್ರತಿ ಬ್ಲಾಕ್‍ಗಳಿಗೆ ಓರ್ವ ಬ್ಲಾಕ್ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‍ಗಳನ್ನು ಕಡ್ಡಾಯವಾಗಿ ನಿμÉೀಧಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿμÉೀಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ಸಮಯದಲ್ಲಿ ಮುಚ್ಚಿಸಲು ಆದೇಶ ಹೊರಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ 51 ಪರೀಕ್ಷೆ ಕೇಂದ್ರಗಳು: ಪರೀಕ್ಷೆಯು ಜಿಲ್ಲೆಯ ವಿವಿಧ ತಾಲೂಕುಗಳಾದ ದೇವದುರ್ಗ 08, ಲಿಂಗಸೂಗೂರು 11, ಮಾನವಿ 09, ರಾಯಚೂರು 16 ಹಾಗೂ ಸಿಂಧನೂರು 07 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು ಹಾಗೂ ಅಭಿರಕ್ಷಕರು ಸೇರಿದಂತೆ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande