ಸಂಡೂರು, 23 ಮೇ (ಹಿ.ಸ.) :
ಆ್ಯಂಕರ್ : ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಯಶವಂತನಗರದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ 1 ನೇ ತರಗತಿ ಮತ್ತು 6 ನೇ ತರಗತಿಯ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಇದೇ ವಸತಿ ಶಾಲೆಯಲ್ಲಿ ಪಡೆದು ಭರ್ತಿ ಮಾಡಿ ಜೂ 06 ರೊಳಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08395-200073 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
,
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್