ಯಲಬುರ್ಗಾ/ಕುಕನೂರ : ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 23 ಮೇ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿಗಾಗಿ ಯಲಬುರ್ಗಾ/ಕುಕನೂರ ತಾಲ್ಲೂಕಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಲಬುರ್ಗಾ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮ
ಯಲಬುರ್ಗಾ/ಕುಕನೂರ : ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 23 ಮೇ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿಗಾಗಿ ಯಲಬುರ್ಗಾ/ಕುಕನೂರ ತಾಲ್ಲೂಕಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯಲಬುರ್ಗಾ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ ವಸತಿ ನಿಲಯಗಳಾದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಯಲಬುರ್ಗಾ, ಹಿರೇಅರಳಿಹಳ್ಳಿ, ಗಾಣದಾಳ, ಚಿಕ್ಕಮ್ಯಾಗೇರಿ, ಹಿರೇವಂಕಲಕುಂಟಾ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಬೇವೂರು ಮತ್ತು ಯಲಬುರ್ಗಾ, ಕುಕನೂರು ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕುಕನೂರು, ಸೋಂಪುರ, ರಾಜೂರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮಂಗಳೂರು ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.

ಯಲಬುರ್ಗಾ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಸತಿ ನಿಲಯಗಳಾದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ(ಪ.ಜಾತಿ) ಬಾಲಕರ ವಸತಿ ನಿಲಯ ಯಲಬುರ್ಗಾ, ಬಾಲಕಿಯರ ವಸತಿ ನಿಲಯ ಯಲಬುರ್ಗಾ, ಕುಕನೂರು ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕುಕನೂರು, ಬಾಲಕಿಯರ ವಸತಿ ನಿಲಯ ಕುಕನೂರು ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಜರಾಕ್ಸ್ ಪ್ರತಿಗಳು, ವಿದ್ಯಾರ್ಥಿ ಹಾಗೂ ಪೆÇೀಷಕರ ಆಧಾರ್ ಕಾರ್ಡ್ ಪ್ರತಿಗಳು ಮತ್ತು ವಿದ್ಯಾರ್ಥಿಯ ಪಾಸ್‍ಪೋರ್ಟ್ ಅಳತೆಯ 04 ಭಾವಚಿತ್ರಗಳೊಂದಿಗೆ ಸಹಾಯಕ ನಿರ್ದೇಶಕರು ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ, ಕುಕನೂರ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande