27 Jun 2025, 12:12 HRS IST

ಬಳ್ಳಾರಿ : ಮೇ 26 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2
ಬಳ್ಳಾರಿ, 23 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯಾದ್ಯಂತ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 26 ರಿಂದ ಜೂ.02 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸು
ಬಳ್ಳಾರಿ : ಮೇ 26 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2


ಬಳ್ಳಾರಿ, 23 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯಾದ್ಯಂತ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 26 ರಿಂದ ಜೂ.02 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.

ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande