ಮೈಸೂರು, 23 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa