ಇ.ಡಿ, ಐ.ಟಿ ದಾಳಿ ರಾಜಕೀಯ ಪ್ರೇರಿತವಾಗಬಾರದು : ಸಿದ್ದರಾಮಯ್ಯ
ಮೈಸೂರು, 23 ಮೇ (ಹಿ.ಸ.) : ಆ್ಯಂಕರ್ : ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ , ಇ.ಡಿ ಹಾಗೂ ಐ.ಟಿ ಅಧಿಕಾರಿಗಳು ತನಿಖೆ ಮಾಡುವುದನ್ನೇ ಆಗಲಿ ಅಥವಾ
Cm


ಮೈಸೂರು, 23 ಮೇ (ಹಿ.ಸ.) :

ಆ್ಯಂಕರ್ : ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ , ಇ.ಡಿ ಹಾಗೂ ಐ.ಟಿ ಅಧಿಕಾರಿಗಳು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande