ಕೊಪ್ಪಳ, 23 ಮೇ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ, ನಿರ್ವಸತಿ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಷ್ಟಗಿ ವಿಧಾನಸಭಾ ಮತಕ್ಷೇತ್ರಕ್ಕೆ(ಸಾಮಾನ್ಯ ವರ್ಗ-19, ಪ.ಜಾತಿ-04, ಪ.ಪಂಗಡ-02) ಒಟ್ಟು 25 ಮನೆಗಳು ಹಂಚಿಕೆಯಾಗಿವೆ. ಈ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ಮನೆಗಳನ್ನು ನಿರ್ಮಿಸಿಕೊಳ್ಳು ಸಹಾಯಧನ ನೀಡಲಾಗುತ್ತದೆ. ಕುಷ್ಟಗಿ ತಾಲ್ಲೂಕಿನ ಮೀನುಗಾರರ ಸಹಕಾರ ಸಂಘಗಳ/ಎಫ್.ಎಫ್.ಪಿ.ಒ(ಸಂಸ್ಥೆ) ಸದಸ್ಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಿರ್ವಸತಿ ಮೀನುಗಾರರು ಜೂನ್ 30 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಕುಷ್ಟಗಿ ಕಾರ್ಯಾಲಯದಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಭೇಟಿ ನೀಡಬಹುದು ಎಂದು ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್