ಗ್ರಾ.ಪಂ. ಉಪಚುನಾವಣೆ : ಸಂತೆ-ಜಾತ್ರೆಗಳನ್ನು ನಿಷೇಧಿಸಿ ಆದೇಶ
ಕೊಪ್ಪಳ, 23 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಎರಡು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 25 ರಂದು ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನವನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ಜರ
ಗ್ರಾ.ಪಂ. ಉಪಚುನಾವಣೆ : ಸಂತೆ-ಜಾತ್ರೆಗಳನ್ನು ನಿಷೇಧಿಸಿ ಆದೇಶ


ಕೊಪ್ಪಳ, 23 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಎರಡು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 25 ರಂದು ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನವನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ಪ್ರಕರಣ 36 ರ ಅಡಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಸಂತೆ-ಜಾತ್ರೆಗಳನ್ನು ನಿಷೇಧಿಸಿ(ರದ್ದುಪಡಿಸಿ) ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಕವಲೂರು ಗ್ರಾಮ ಪಂಚಾಯತಿ ಹಾಗೂ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮ ಪಂಚಾಯತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸದಸ್ಯ ಸ್ಥಾನಗಳಿಗೆ ಮೇ 25 ರಂದು ಚುನಾವಣೆ ನಡೆಯಲಿದೆ. ಆದೇಶದನ್ವಯ ಚುನಾವಣೆ ದಿನದಂದು ಸಂಬಂಧಿಸಿದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಂತೆ-ಜಾತ್ರೆಗಳನ್ನು ನಡೆಸಬಾರದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande