ಗ್ರಾಪಂ ಉಪಚುನಾವಣೆ : ಮದ್ಯ ಮಾರಾಟ ನಿಷೇಧ ,
ಬಳ್ಳಾರಿ, 23 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಹಗರಿಬೊಮ್ಮಹಳ್ಳಿ ತಾಲೂಕಿನ ಮಾಲವಿ ಗ್ರಾಪಂ ಹಾಗೂ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಪಂಗಳಲ್ಲಿ ತೆರವಾದ ಸ್ಥಾನಕ್ಕೆ ಮೇ.25 ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್
ಗ್ರಾಪಂ ಉಪಚುನಾವಣೆ : ಮದ್ಯ ಮಾರಾಟ ನಿಷೇಧ ,


ಬಳ್ಳಾರಿ, 23 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಹಗರಿಬೊಮ್ಮಹಳ್ಳಿ ತಾಲೂಕಿನ ಮಾಲವಿ ಗ್ರಾಪಂ ಹಾಗೂ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಪಂಗಳಲ್ಲಿ ತೆರವಾದ ಸ್ಥಾನಕ್ಕೆ ಮೇ.25 ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ 1993 ರ ಪ್ರಕರಣ 308ಎಸಿ ರಂತೆ ಮೇ.23 ರ ಸಂಜೆ 5 ಗಂಟೆಯಿಂದ ಮೇ.25 ರ ಸಂಜೆ 5 ಗಂಟೆವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮದ್ಯಾಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮತ್ತು ಮದ್ಯದಂಗಡಿಯನ್ನು ಮುಚ್ಚುವಂತೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande