ಪರಮೇಶ್ವರ ಸಂಕಷ್ಟಕ್ಕೆ ಕಾಂಗ್ರೆಸ್​​ನ ಪ್ರಭಾವಿ ನಾಯಕ ಕಾರಣ‌ : ಕುಮಾರಸ್ವಾಮಿ
ನವದೆಹಲಿ, 23 ಮೇ (ಹಿ.ಸ.) : ಆ್ಯಂಕರ್ : ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಗೆ, ಹಿಂದುಳಿದ ವರ್ಗಗದವರನ್ನು ಗುರಿಯಾಗಿಸಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು
Hdk


ನವದೆಹಲಿ, 23 ಮೇ (ಹಿ.ಸ.) :

ಆ್ಯಂಕರ್ : ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಗೆ, ಹಿಂದುಳಿದ ವರ್ಗಗದವರನ್ನು ಗುರಿಯಾಗಿಸಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು ಸಚಿವ ಪರಮೇಶ್ವರ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್​​ನ ಪ್ರಭಾವಿ ನಾಯಕನೇ ಕಾರಣ‌ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ನಾಯಕ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿದೆ. ಹೆಣ್ಣು ಮಗಳು ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಪರಮೇಶ್ವರ್ ದಲಿತರ ಸಮಾವೇಶ ಮಾಡಲು ಹೊರಟರು. ತಾವೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಮಾವೇಶಕ್ಕೆ ಮುಂದಾದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಭಾವಿ ನಾಯಕನೇ ಅವರನ್ನು ಸಿಲುಕಿಸಿದ್ದಾರೆ. ಇದೆಲ್ಲಾ ಸಿದ್ದರಾಮಯ್ಯಗೆ ಗೊತ್ತಿಲ್ಲವೇ? ಮುಂದೆ ಮುಖ್ಯಮಂತ್ರಿ ಆಗಲು ಟವಲ್ ಹಾಸಿಕೊಂಡು ಇರುವವರೇ ಸಂದೇಶ ನೀಡಿದ್ದಾರೆ. ಈ ಪ್ರಕರಣ ಹೊರಬರಲು ಸಂದೇಶ ನೀಡಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ, ಮುಖ್ಯಮಂತ್ರಿ ಹತ್ತಿರ ಗುಪ್ತಚರ ಇಲಾಖೆ ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಇದೆಲ್ಲಾ ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕನಿಂದ ಇದೆಲ್ಲಾ ಆಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande