ಕೊಪ್ಪಳ, 23 ಮೇ (ಹಿ.ಸ.) :
ಆ್ಯಂಕರ್ : 2025ರ ದ್ವಿತೀಯ ಪಿಯುಸಿ ಪರೀಕ್ಷೆ-2 ಈಗಾಗಲೇ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿರುತ್ತದೆ. ಪರೀಕ್ಷೆಯನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಸಂಬಂಧ 3ನೇ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವಂತೆ ಸೂಚಿಸಿದೆ.
ಜೂನ್ 09 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 26 ಕೊನೆಯ ದಿನವಾಗಿದೆ. ಉತ್ತೀರ್ಣರಾಗದ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ತಮ್ಮ ಕಾಲೇಜಿಗೆ ಭೇಟಿ ನೀಡಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆಯನ್ನು ಕಾಲೇಜುಗಳಲ್ಲಿ ನಡೆಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್