ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ : ಡಾ.ಎಂ.ಡಿ.ಶಾಕೀರ್
ರಾಯಚೂರು, 23 ಮೇ (ಹಿ.ಸ.) : ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯೊಳಿಸಿರುವ ಹಿನ್ನಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆಯನ್ನು
ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ : ಡಾ.ಎಂ.ಡಿ.ಶಾಕೀರ್


ರಾಯಚೂರು, 23 ಮೇ (ಹಿ.ಸ.) :

ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯೊಳಿಸಿರುವ ಹಿನ್ನಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆಯನ್ನು ಪಡೆಯಬೇಕೆಂದು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳಾದ ಡಾ.ಎಂ.ಡಿ.ಶಾಕೀರ್ ಅವರು ತಿಳಿಸಿದ್ದಾರೆ.

ತಂಬಾಕು ಉತ್ಪನ್ನ ಮಾರಾಟ ಪಡೆಯಲು ಮಹಾನಗರ ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಆಧಾರ ಕಾರ್ಡ, ಬಾಡಿಗೆ ಕರಾರು ಪತ್ರ, ಉದ್ದಿಮೆ ಪರವಾನಿಗೆ ಹಾಗೂ ಫೋಟೋಗಳು ಸೇರಿದಂತೆ ಇತರೆ ಅಗತ್ಯ ಮಾಹಿತಿಯೊಂದಿಗೆ ಮೇ.31ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶುಲ್ಕು 500 ರೂ.ಗಳಾಗಿದ್ದು 5 ವರ್ಷ ಚಾಲ್ತಿಯಲ್ಲಿರುತ್ತದೆ. ನಿಗದಿತ ದಿನಾಂಕದ ನಂತರ ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ವ್ಯಾಪಾರಸ್ಥರ ಮೇಲೆ ಕಾನೂನು ಕ್ರಮವನ್ನು ಜರುಗಿಸಲಾಗುವುದು ಎಂದು ರಾಯಚೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande